ಕಾರ್ಕಳ (ಉಡುಪಿ):ಚಲಿಸುತ್ತಿದ್ದ ಬಸ್ನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ ಮೃತ ದುರ್ದೈವಿಯಾಗಿದ್ದು, ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದರು.
ಚಲಿಸುತ್ತಿದ್ದ ಬಸ್ನಿಂದ ಆಯತಪ್ಪಿ ಬಿದ್ದು ಅಂಗನವಾಡಿ ಕಾರ್ಯಕರ್ತೆ ಸಾವು - ಬಸ್ನಿಂದ ಆಯತಪ್ಪಿ ಬಿದ್ದು, ಕಾರ್ಕಳದ ಅಂಗನವಾಡಿ ಕಾರ್ಯಕರ್ತೆ ಸಾವು.
ಚಲಿಸುತ್ತಿದ್ದ ಬಸ್ನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ ಮೃತ ದುರ್ದೈವಿಯಾಗಿದ್ದು, ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದರು.
ಅಂಗನವಾಡಿ ಕಾರ್ಯಕರ್ತೆ ಸಾವು.
ಕಾಡುಹೊಳೆಯ ಕೋಟೆಬೈಲು ಬಳಿಯಿರುವ ತಿರುವಿನಲ್ಲಿ ಬಸ್ ಚಲಿಸುತ್ತಿರುವಾಗ ಆಯತಪ್ಪಿ ಅವರು ಬಸ್ನಿಂದ ಹೊರಗಡೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೆಬ್ರಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಬಸ್ ಚಾಲಕನ ಅಜಾಗರುಕತೆಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.