ಉಡುಪಿ:ಬ್ರಹ್ಮಾವರ ಸಾಯಿಬ್ರಕಟ್ಟೆ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿಯ ಅಸಹಜ ಸಾವಿನ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಆರೋಪಿ ಚೇತನ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಕೆಲ ದಿನಗಳ ಹಿಂದೆ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅನಿಶಾ ಪೂಜಾರಿ ಅಸಹಜ ಸಾವು ಪ್ರಕರಣ: ಸಿಒಡಿ ತನಿಖೆಗೆ ಅರ್ಜಿ ಸಲ್ಲಿಸಿದ ತಾಯಿ - udupi latest news
ಅನಿಶಾ ಪೂಜಾರಿಯ ಅಸಹಜ ಸಾವಿನ ಪ್ರಕರಣದಲ್ಲಿ ಬಹಳಷ್ಟು ಸಂಶಯ ಮೂಡಿ ಬಂದಿರುವುದರಿಂದ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ. ಮೃತಳ ತಾಯಿ ಪ್ರೇಮಾ, ಪ್ರಕರಣವನ್ನು ಭೇದಿಸುವ ಬಗ್ಗೆ ಸಿಒಡಿ ತನಿಖೆ ಮಾಡುವಂತೆ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅನಿಶಾ ಪೂಜಾರಿ ಮೃತ ಪ್ರಕರಣ: ಸಿಓಡಿ ತನಿಖೆಗೆ ಅರ್ಜಿ ಸಲ್ಲಿಸಿದ ತಾಯಿ
ಅನಿಶಾ ಪೂಜಾರಿ ಕುಟುಂಬಸ್ಥರು ಅನಿಶಾ ಸಾವಿಗೆ ಸಂಬಂಧಿಸಿ ದೊರಕಿರುವ ಸಾಕ್ಷಿ ಮತ್ತು ದೃಶ್ಯ ಚಿತ್ರದಿಂದ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಭಾವಿಸಿದ್ದರು. ಆದರೆ ಈ ಸಾವಿನ ಪ್ರಕರಣದಲ್ಲಿ ಬಹಳಷ್ಟು ಸಂಶಯ ಮೂಡಿ ಬಂದಿರುವುದರಿಂದ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ. ಮೃತಳ ತಾಯಿ ಪ್ರೇಮಾ, ಪ್ರಕರಣವನ್ನು ಭೇದಿಸುವ ಬಗ್ಗೆ ಸಿಒಡಿ ತನಿಖೆ ಮಾಡುವಂತೆ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.