ಉಡುಪಿ: ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಈಗಾಗಲೇ ಆದೇಶ ಕೊಟ್ಟಿದೆ. ಉತ್ತರ ಪ್ರದೇಶ, ಹರಿಯಾಣ ಹಾಗು ಮಧ್ಯಪ್ರದೇಶ ಸರ್ಕಾರಗಳೂ ಕಾನೂನು ಜಾರಿಗೆ ತರುವ ಚಿಂತನೆ ಮಾಡಿವೆ. ಕರ್ನಾಟಕ ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾನೂನನ್ನು ಯಾವ ರೀತಿ ಜಾರಿಗೆ ತರಬೇಕು, ಯಾವ ಅಂಶಗಳನ್ನು ಸೇರಿಸಬೇಕೆಂಬುದೆಲ್ಲಾ ಮುಖ್ಯ ಎಂದು ಗೃಹ ಸಚಿವರು ಹೇಳಿದರು.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ಓದಿ:ಲವ್ ಜಿಹಾದ್ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲಿದೆ: ನಳೀನ್ ಕುಮಾರ್ ಕಟೀಲ್
ಈ ನಿಟ್ಟಿನಲ್ಲಿ ಉತ್ತರಪ್ರದೇಶ ಸರ್ಕಾರ ಅಧಿಸೂಚನೆ ಹೊರಡಿಸಿ ಆಗಿದೆ. ಯುಪಿ ಸರ್ಕಾರ ಹೊರಡಿಸುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದನ್ನು ಒಪ್ಪಿದ್ದಾರೆ. ಮಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕಾರಣಿಯಲ್ಲಿ ಇದನ್ನು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.
ಮುನ್ನೂರು ವರ್ಷದಿಂದ ಲವ್ ಜಿಹಾದ್ ಇದೆ ಅಂತ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು ಇನ್ನೂ ಮೊಘಲ್ ಶಕೆಯಲ್ಲಿಯೇ ಇದ್ದಾರೆ ಎಂದು ಬೊಮ್ಮಾಯಿ ಇದೇ ವೇಳೆ ಕುಟುಕಿದರು.