ಉಡುಪಿ:ನಗರಸಭೆಯ ಮಾಜಿ ಅಧ್ಯಕ್ಷೆ ಶಾಂತ ನಾಯ್ಕ ಅವರ ಪತಿ ಕೃಷ್ಣನಾಯ್ಕ (50) ಮೇಲೆ ಗೇಟ್ ರಾಡ್ನಿಂದ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ವೈಯಕ್ತಿಕ ಕಲಹ ಕಾರಣ ಎಂದು ಹೇಳಲಾಗುತ್ತಿದೆ.
ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಪತಿ ಮೇಲೆ ರಾಡ್ನಿಂದ ಹಲ್ಲೆ - ರಾಡ್ನಿಂದ ಹಲ್ಲೆ
ವೈಯಕ್ತಿಕ ಕಾರಣಕ್ಕೆ ಸ್ಥಳೀಯ ನಿವಾಸಿ ಅರ್ಜುನ್ ಎಂಬ ಯುವಕ ನಗರಸಭೆಯ ಮಾಜಿ ಅಧ್ಯಕ್ಷೆ ಶಾಂತ ನಾಯ್ಕ ಅವರ ಪತಿಯ ಮೇಲೆ ಹಲ್ಲೆ ಮಾಡಿದ್ದಾನೆ.
ವೈಯಕ್ತಿಕ ಹಗೆಯೇ ಕಾರಣ
ಸ್ಥಳೀಯ ನಿವಾಸಿ ಅರ್ಜುನ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಕೃಷ್ಣನಾಯ್ಕ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮದುವೆಯಾದ 3 ತಿಂಗಳಿಗೆ ವ್ಯಕ್ತಿ ಆತ್ಯಹತ್ಯೆ; ಹೆಂಡತಿ ಕಿರುಕುಳ ಕಾರಣವೆಂದ ಪೋಷಕರು