ಕರ್ನಾಟಕ

karnataka

ETV Bharat / state

ಬೈಕ್-ಟೆಂಪೋ ಮುಖಾಮುಖಿ.. ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ.. - accident at Udupi

ಮುಳ್ಳಿಕಟ್ಟೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಬೈಕ್ ಹಾಗೂ ಟೆಂಪೋ ಟ್ರಾವೆಲರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

Bike-tempo accident at Udupi
ಬೈಕ್- ಟೆಂಪೋ ನಡುವೆ ಅಪಘಾತ: ಇಬ್ಬರ ದುರ್ಮರಣ

By

Published : Dec 1, 2019, 8:38 AM IST

ಉಡುಪಿ:ಜಿಲ್ಲೆಯ ಗಂಗೊಳ್ಳಿ ಸಮೀಪದ ಮುಳ್ಳಿಕಟ್ಟೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಬೈಕ್ ಹಾಗೂ ಟೆಂಪೋ ಟ್ರಾವೆಲರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಮೃತರನ್ನು ಬೈಕ್ ಸವಾರ ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಶಾದಾಬ್ (43) ಹಾಗೂ ಸಹಸವಾರ ಬೈಂದೂರು ಮೂಲದ ಸದ್ಯ ಗಂಗೊಳ್ಳಿ ಬಾಡಿಗೆ ಮನೆ ನಿವಾಸಿ ಅಬ್ದುರ್ರಹೀಂ (51) ಎಂದು ಗುರುತಿಸಲಾಗಿದೆ.

ಬೈಕ್​ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಇಬ್ಬರೂ ಸವಾರರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಶಾದಾಬ್ ಮೀನಿನ ಲಾರಿ ಚಾಲಕನಾಗಿ ದುಡಿಯುತ್ತಿದ್ದರೆ, ಅಬ್ದುರ್ರಹೀಂ ಅಡುಗೆ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details