ಕರ್ನಾಟಕ

karnataka

ETV Bharat / state

ಉದ್ಧವ್​ ಠಾಕ್ರೆ ಹೇಳಿಕೆ ಭಾರತೀಯ ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಬಿ.ಎಸ್​.ಯಡಿಯೂರಪ್ಪ - Karnataka Chief Minister BS Yediyurappa on Monday slammed Maharashtra Chief Minister and said that Uddhav Thackeray's speech

ಯಾವುದೇ ಕಾರಣಕ್ಕೂ ನಮ್ಮ ರಾಜ್ಯದ ಒಂದಿಂಚು ಭೂಮಿಯನ್ನು ಕೊಡುವ ಪ್ರಶ್ನೆಯೇ ಉದ್ಭವವಾಗಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ ಎಂದು ಬಿ.ಎಸ್​.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಸಿದರು.

Karnataka Chief Minister BS Yediyurappa
ಬಿ.ಎಸ್​.ಯಡಿಯೂರಪ್ಪ

By

Published : Jan 18, 2021, 6:20 PM IST

ಉಡುಪಿ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಉದ್ದಟತನದಿಂದ ಕೂಡಿದೆ. ಇದು ಭಾರತೀಯ ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: ಠಾಕ್ರೆ ಉದ್ಧಟತನದ ಬಗ್ಗೆ ವಿಚಾರ ಮಾಡ್ತಾರಂತೆ ಸಂಸದ ಅನಂತ್‌ಕುಮಾರ್‌ ಹೆಗಡೆ

ಗಡಿ ವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಮತ್ತೆ ಮತ್ತೆ ಕೆದಕುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರು ಒಂದೇ ತಾಯಿಯ ಮಕ್ಕಳಂತೆ ಸೌಹಾರ್ದತೆಯಿಂದ ಇದ್ದಾರೆ. ಆದರೆ, ಆ ವಾತಾವರಣ ಕೆಡಿಸುವ ಕೆಲಸ ಮಾಡಬೇಡಿ, ಅಶಾಂತಿ ಮೂಡಿಸುವ ಪ್ರಯತ್ನ ನಿಮಗೆ ಗೌರವ ತರುವ ಕೆಲಸವಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಥರದ ಹೇಳಿಕೆಗಳು ಸಹಜವಾಗಿಯೇ ಕನ್ನಡಿಗರಲ್ಲಿ ಆಕ್ರೋಶ ಮೂಡಿಸುತ್ತದೆ. ರಾಜಕೀಯ ಪ್ರೇರಿತ ಹೇಳಿಕೆಗಳಿಗೆ ತಲೆ ಕೆಡಿಸಿಕೊಳ್ಳಬಾರದು ಎಂದು ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಒಂದಾಗಿ ಒಟ್ಟಾಗಿ ಹೋಗೋಣ ಎಂದು ವಿನಂತಿಸಿದರು.

ABOUT THE AUTHOR

...view details