ಉಡುಪಿ: ಕಾರು ಡಿಕ್ಕಿಯಾಗಿ ಬಸ್ಗೆ ಕಾಯುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಾಪು ತಾಲೂಕು ಎರ್ಮಾಳು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಡಿಕ್ಕಿಯಾಗಿ ಬಸ್ಗಾಗಿ ಕಾಯುತ್ತಿದ್ದ ಇಬ್ಬರ ಸಾವು - ಎರ್ಮಾಳು ಕಾರು ಅಪಘಾತ
ಬಸ್ಗೆ ಕಾಯುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಾಪು ತಾಲೂಕು ಎರ್ಮಾಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಕಾರು ಡಿಕ್ಕಿ
ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಸಾವನ್ನಪ್ಪಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರಿಬ್ಬರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.