ಕರ್ನಾಟಕ

karnataka

ETV Bharat / state

ಕುಂದಾಪುರ ಬಳಿ ಹೆದ್ದಾರಿಯಿಂದ ಸಮುದ್ರಕ್ಕೆ ಹಾರಿದ ಕಾರು: ಓರ್ವ ಸಾವು, ಮತ್ತೋರ್ವ ನಾಪತ್ತೆ - ಮರವಂತೆ ಹೆದ್ದಾರಿ ಬಿಟ್ಟು ಸಮುದ್ರಕ್ಕೆ ಹಾರಿದ ಕಾರು

ಕುಂದಾಪುರ ಸಮೀಪದ ಮರವಂತೆಯಲ್ಲಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರವಂತೆಯ ರಾಷ್ಟ್ರೀಯ ಹೆದ್ದಾರಿಯಿಂದ ಸಮುದ್ರಕ್ಕೆ ಉರುಳಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಹೆದ್ದಾರಿಯಿಂದ ಸಮುದ್ರಕ್ಕೆ ಹಾರಿದ ಕಾರು
ಹೆದ್ದಾರಿಯಿಂದ ಸಮುದ್ರಕ್ಕೆ ಹಾರಿದ ಕಾರು

By

Published : Jul 3, 2022, 5:27 PM IST

ಉಡುಪಿ:ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಕಾರು ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರಿನಲ್ಲಿ ನಾಲ್ವರಿದ್ದು, ಓರ್ವ ಮೃತಪಟ್ಟಿದ್ದಾರೆ. ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಇಬ್ಬರು ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ಕಾರು ತೆರಳುತ್ತಿತ್ತು ಎನ್ನಲಾಗ್ತಿದೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಕಾರನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿರಾಜ್ ಆಚಾರ್ಯ (28) ಎಂಬುವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಂದೇಶ್ ಮತ್ತು ಕಾರ್ತಿಕಗೆ ಗಂಭೀರ ಗಾಯಗಳಾಗಿವೆ.

ಹೆದ್ದಾರಿಯಿಂದ ಸಮುದ್ರಕ್ಕೆ ಹಾರಿದ ಕಾರು

ಕಾರಿನ ಮುಂಭಾಗದಲ್ಲಿದ್ದ ರೋಶನ್ ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು ಅಗ್ನಿಶಾಮಕ ದಳದವರಿಂದ ಇನ್ನೊಂದು ಶವ ಪತ್ತೆಗಾಗಿ ಶೋಧ ಮುಂದುವರೆದಿದೆ.

ಇದನ್ನೂ ಓದಿ:ಪೋಷಕರಿಗೆ ವಾಟ್ಸ್​ಆ್ಯಪ್​ ಸಂದೇಶ ರವಾನಿಸಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ

ABOUT THE AUTHOR

...view details