ಕರ್ನಾಟಕ

karnataka

ETV Bharat / state

ಪ್ರೇಮಿಗಳ ನಡುವಿನ ಭಿನ್ನಾಭಿಪ್ರಾಯವನ್ನೇ ಬಂಡವಾಳ ಮಾಡ್ಕೊಂಡ ಆರೋಪಿ ಅರೆಸ್ಟ್‌ - cheating case

ಪ್ರೇಮಿಗಳ ನಡುವಿನ ಭಿನ್ನಾಭಿಪ್ರಾಯವನ್ನೇ ಬಂಡವಾಳ ಮಾಡಿಕೊಂಡು 1 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಶಂಕರನಾರಾಯಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅರೆಸ್ಟ್​
Arrest

By

Published : Jul 12, 2021, 10:49 PM IST

ಉಡುಪಿ: ಪ್ರೇಮಿಗಳ ನಡುವಿನ ಭಿನ್ನಾಭಿಪ್ರಾಯವನ್ನೇ ಬಂಡವಾಳ ಮಾಡಿಕೊಂಡ ವ್ಯಕ್ತಿಯೊಬ್ಬ ಯುವತಿಗೆ ನ್ಯಾಯ ದೊರಕಿಸಿಕೊಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶೇಖರ ಬಳೆಗಾರ್ ಬಂಧಿತ ಆರೋಪಿ. ಪತ್ರಿಕೆ ಹಾಗೂ ಪೊಲೀಸರ ಹೆಸರಲ್ಲಿ ಹಣ ಪಡೆದು ವಂಚಿಸಿದ್ದಾನೆ ಎಂದು ಯುವತಿಯೊಬ್ಬಳು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶಂಕರನಾರಾಯಣ ಠಾಣಾ ವ್ಯಾಪ್ತಿಯ ನೆಂಚಾರು ಎಂಬಲ್ಲಿಯ ಯುವತಿ ಹಾಗೂ ಹಾಲಾಡಿಯ ಯೋಗೀಶ ನಾಯ್ಕ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಳಿಕ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಈ ಕುರಿತು ಯುವತಿ ಶಂಕರನಾರಾಯಣ ಠಾಣೆಗೆ ದೂರು ನೀಡಿದ್ದಳು. ಠಾಣೆಯಲ್ಲಿ ಪಂಚಾಯಿತಿ ನಡೆದು ಇಬ್ಬರೂ ಪ್ರತ್ಯೇಕವಾಗಿದ್ದರು ಎನ್ನಲಾಗಿದೆ.

ಯುವತಿ ಕುಂದಾಪುರ ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿಯಾಗಿದ್ದು, ಪತ್ನಿಗೆ ಆರೋಗ್ಯ ಸಮಸ್ಯೆಯಿದ್ದ ಹಿನ್ನೆಲೆ ಶೇಖರ್ ಬಳೆಗಾರ್ ಕುಂದಾಪುರ ಆಸ್ಪತ್ರೆ ಬಂದಿದ್ದ. ಈ ಸಂದರ್ಭ ಯುವತಿ ಹಾಗೂ ಶೇಖರ ಬಳೆಗಾರ್ ಪರಿಚಯವಾಗಿದ್ದು, ಯುವತಿ ತನ್ನ ಸಮಸ್ಯೆ ಹೇಳಿಕೊಂಡಿದ್ದಾಳೆ ಎನ್ನಲಾಗಿದೆ.

ಬಳಿಕ ತನಗೆ ಅಧಿಕಾರಿಗಳು ಹಾಗೂ ಪತ್ರಿಕೆಯವರ ಸಂಪರ್ಕ ಇದೆ ಎಂದು ನಂಬಿಸಿ, ಅವರಿಗೆ ಹಣ ಕೊಡಬೇಕಾಗುತ್ತದೆ ಎಂದು ಹೇಳಿ, ಮೂರು ಬಾರಿ ಒಟ್ಟು 95 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾನೆ. ಜೊತೆಗೆ ಮತ್ತೆ 1 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ABOUT THE AUTHOR

...view details