ಉಡುಪಿ:ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕರಾದ ಭೋಜಣ್ಣ (80)ಎಂಬುವರು ರಿವಾಲ್ವರ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.
ಉಡುಪಿ: ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ - Katte Bhojana commits suicide
ಕೋಟ್ಯಧಿಪತಿಯಾಗಿದ್ದ ಕಟ್ಟೆ ಭೋಜಣ್ಣ (80) ಎಂಬುವರು ರಿವಾಲ್ವರ್ನಿಂದ ಶೂಟ್ ಮಾಡಿಕೊಂಡಿದ್ದಾರೆ.
ಕಟ್ಟೆ ಭೋಜಣ್ಣ ಆತ್ಮಹತ್ಯೆ
ಕೋಟ್ಯಧಿಪತಿಯಾಗಿದ್ದ ಇವರು ಕಟ್ಟೆ ಭೋಜಣ್ಣ ಎಂದೇ ಖ್ಯಾತರು. ಬೆಂಗಳೂರಿನಲ್ಲಿ ಹಲವಾರು ಹೋಟೆಲ್ಗಳ ಮಾಲೀಕರು ಆಗಿದ್ದಾರೆ. ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯೂ ಆಯಾಗಿದ್ದರು.
ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಮುಂದಿನ ತನಿಖೆ ಆರಂಭಿಸಿದ್ದಾರೆ.