ಕರ್ನಾಟಕ

karnataka

ETV Bharat / state

ಕಾಂಗ್ರೆಸ್ - ಜೆಡಿಎಸ್  ಅಸ್ತಿತ್ವ ಕಳೆದುಕೊಂಡಿವೆ: ಡಿಸಿಎಂ ಅಶ್ವತ್ಥ್​ ನಾರಾಯಣ ಟಾಂಗ್​ - ongress JDS parties have lost their existence DCM Ashwath Narayana

ಕೆಟ್ಟ ಸಮ್ಮಿಶ್ರ ಸರಕಾರ ಪತನಗೊಳಿಸಿದ್ದು ಅನರ್ಹ ಶಾಸಕರು, ಆ ಶಾಸಕರು ಸಮಾಜದ ರಕ್ಷಣೆಗೆ ಬಂದವರು. ಅವರು ಸತ್ಕಾರ್ಯ ಮಾಡಿದವರು. ಅವರಿಗೆ ಮಾನ್ಯತೆ ಸಿಗದೇ ಮತ್ಯಾರಿಗೆ ಸಿಗಬೇಕು. ಅವರು ಈವರೆಗೆ ಬಿಜೆಪಿ ಪಕ್ಷ ಸೇರಿಲ್ಲ, ಸೇರ್ಪಡೆ ನಂತರ ಯಾರಿಗೆ ಟಿಕೆಟ್ ಕೊಡಬೇಕು ಅಂತ ಪಕ್ಷ ನಿರ್ಧರಿಸುತ್ತದೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೇಳಿದರು.

ಡಿಸಿಎಂ ಅಶ್ವಥ್ ನಾರಾಯಣ

By

Published : Oct 25, 2019, 8:23 PM IST

ಉಡುಪಿ:ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಸಂಪೂರ್ಣ ಅಸ್ಥಿತ್ವ ಕಳೆದುಕೊಂಡಿದೆ, ಒಳಜಗಳ, ಸಮಾಜ ಒಡೆಯುವ ಕಾರ್ಯಕ್ಕೆ ಜನ ಬೇಸತ್ತಿದ್ದಾರೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೇಳಿದರು.

ಡಿಕೆ ಶಿವಕುಮಾರ್ ಬಿಡುಗಡೆ ಬಗ್ಗೆ ಮಾತನಾಡಿ, ಇರೋ ಸರಕಾರವನ್ನು ಅವರು ಉಳಿಸಿಕೊಂಡಿಲ್ಲ, ಇಲಿ ಬಂದ್ರೆ ಹುಲಿ ಬಂತು ಎನ್ನಲಾಗುತ್ತಿದೆ. ಅವರ ಬಿಡುಗಡೆಗೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ. ಎಲ್ಲೂ ಸಲ್ಲದವರು ಈಗ ಉಪಚುನಾವಣೆಯಲ್ಲಿ ಸಲ್ಲುತ್ತಾರಾ, ಸಮಾಜಕ್ಕೆ ಭ್ರಷ್ಟಾಚಾರ ರಹಿತ ಆಡಳಿತ ಬೇಕು, ಭ್ರಷ್ಟಾಚಾರ ಪೂರಕ ಸಮಾಜ ಕಟ್ಟೋದಕ್ಕೆ ಅಸಾಧ್ಯ. ಜಾತಿಯ ಹಿನ್ನೆಲೆಯಲ್ಲಿ ರಕ್ಷಣೆ ಪಡೆಯುವುದು ಸರಿಯಲ್ಲ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ನೀಡಿದರು.

ಡಿಸಿಎಂ ಅಶ್ವತ್ಥ್​ ನಾರಾಯಣ

ವ್ಯಕ್ತಿಗತ ರಾಜಕೀಯಕ್ಕೆ ನಾವು ಒತ್ತು ಕೊಡುವುದಿಲ್ಲ. ಕೆಟ್ಟ ಸಮ್ಮಿಶ್ರ ಸರಕಾರ ಪತನಗೊಳಿಸಿದ್ದು ಅನರ್ಹ ಶಾಸಕರು, ಆ ಶಾಸಕರು ಸಮಾಜದ ರಕ್ಷಣೆಗೆ ಬಂದವರು. ಅವರು ಸತ್ಕಾರ್ಯ ಮಾಡಿದವರು. ಅವರಿಗೆ ಮಾನ್ಯತೆ ಸಿಗದೆ ಮತ್ಯಾರಿಗೆ ಸಿಗಬೇಕು. ಅವರು ಈವರೆಗೆ ಬಿಜೆಪಿ ಪಕ್ಷ ಸೇರಿಲ್ಲ, ಸೇರ್ಪಡೆ ನಂತರ ಯಾರಿಗೆ ಟಿಕೆಟ್ ಕೊಡಬೇಕು ಅಂತ ಪಕ್ಷ ನಿರ್ಧರಿಸುತ್ತದೆ. ಪ್ರಕರಣ ಕೋರ್ಟ್​ನಲ್ಲಿ ಇರೋದ್ರಿಂದ ಹೆಚ್ಚು ಮಾತಾನಾಡಲ್ಲ. ಟಿಪ್ಪು ಜಯಂತಿ ಬಗ್ಗೆ ಶರತ್ ಬಚ್ಚೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ಟಿಪ್ಪು ಜಯಂತಿ ಆಚರಿಸಲ್ಲ. ನಮ್ಮ ಪಕ್ಷದಲ್ಲಿ ಇಲ್ಲದವರು ಟಿಪ್ಪು ಜಯಂತಿ ಆಚರಿಸ್ತಾರೆ. ಈ ಬಗ್ಗೆ ಬಿಜೆಪಿಗೆ ಸ್ಪಷ್ಟತೆ ಇದೆ ಎಂದರು.

ABOUT THE AUTHOR

...view details