ಕರ್ನಾಟಕ

karnataka

ETV Bharat / state

ಮತಾಂತರ ಆರೋಪ: ಇಬ್ಬರು ಯುವತಿಯರನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ - Conversion case

ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಪ್ರಕರಣ ಕಾರ್ಕಳ ತಾಲೂಕಿನ ಮಾವಿನಕಟ್ಟೆಯಲ್ಲಿ ನಡೆದಿದೆ.

ಯುವತಿಯರನ್ನು ತರಾಟೆಗೆ ತೆಗೆದುಕೊಂಡ ಹಿಂದೂ ಸಂಘಟನೆ ಕಾರ್ಯಕರ್ತರು

By

Published : Sep 10, 2019, 7:43 AM IST

ಉಡುಪಿ: ಜನರನ್ನು ಮತಾಂತರಕ್ಕೆ ಪ್ರಚೋದಿಸುತ್ತಿದ್ದರು ಎಂಬ ಆರೋಪದ ಮೇಲೆ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಮಾವಿನಕಟ್ಟೆಯಲ್ಲಿ ನಡೆದಿದೆ.

ಆರ್ಥಿಕವಾಗಿ ಹಿಂದುಳಿದ ಬಡವರ್ಗಗಳನ್ನು ಗುರಿಯಾಗಿಸಿಕೊಂಡು, ಆಮಿಷಗಳನ್ನು ಒಡ್ಡಿ ತಮ್ಮ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದಿಸುತ್ತಿದ್ದರು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೆ, ಇಬ್ಬರು ಯುವತಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮತಾಂತರಕ್ಕೆ ಬಳಸುವ ಪ್ರಚೋದನಕಾರಿ ಕರಪತ್ರಗಳು ಪತ್ತೆಯಾಗಿವೆ ಎಂದು ಹೇಳಲಾಗ್ತಿದೆ.

ಮತಾಂತರ ಆರೋಪ- ಯುವತಿಯರನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

ಸದ್ಯ ಈ ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details