ಉಡುಪಿ: ಮುಂಬೈನಿಂದ ಬಂದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ - ಉಡುಪಿ ಕೊರೊನಾ ಅಪ್ಡೇಟ್
ಮುಂಬೈನಿಂದ ಬಂದು ಕುಂದಾಪುರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗರ್ಭಿಣಿ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
Corona positive ಉಡುಪಿಯಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಪಾಸಿಟಿವ್pregnant woman in Udupi
ಪಿ. 1,235ರ ಸಂಪರ್ಕದಿಂದ 28 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಸೋಂಕಿತ ಮಹಿಳೆಯನ್ನು ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮುಂಬೈನಿಂದ ಬಂದ ಮಹಿಳೆಯನ್ನು ಕುಂದಾಪುರದ ಸರ್ಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸೋಂಕಿತ ಮಹಿಳೆ 7 ತಿಂಗಳ ಗರ್ಭಿಣಿಯಾಗಿದ್ದು, ಪ್ರಗ್ನೆನ್ಸಿ ಟೆಸ್ಟ್ ವೇಳೆ ಸೋಂಕು ತಗುಲಿರುವುದು ಗೊತ್ತಾಗಿದೆ. ಪತಿ, ಪತ್ನಿಯನ್ನು ಒಂದೇ ಕೊಠಡಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಪತ್ನಿಗೆ ಸೋಂಕು ಡೃಢವಾಗುತ್ತಿದ್ದಂತೆ ಪತಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.