ಉಡುಪಿ: ಮೇ 17ರ ಶನಿವಾರ ರಾತ್ರಿ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ವ್ಯಕ್ತಿಯ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಉಡುಪಿ: ಹೃದಯಾಘಾತದಿಂದ ನಿಧನರಾದ ವ್ಯಕ್ತಿಯ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ - Bannanje village in Udupi district
ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ವ್ಯಕ್ತಿಯ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
![ಉಡುಪಿ: ಹೃದಯಾಘಾತದಿಂದ ನಿಧನರಾದ ವ್ಯಕ್ತಿಯ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ Corona test report of a man who died of a heart attack is negative](https://etvbharatimages.akamaized.net/etvbharat/prod-images/768-512-7244592-392-7244592-1589786545591.jpg)
ಜಿಲ್ಲೆಯ ಬನ್ನಂಜೆ ಗ್ರಾಮದ 44 ವರ್ಷ ವಯಸ್ಸಿನ ವ್ಯಕ್ತಿ ಮೂರು ದಿನಗಳಿಂದ ಜ್ವರ, ಶೀತ, ಕೆಮ್ಮಿನಿಂದ ನರಳುತಿದ್ದರು. ಆನಂತರ ಮೇ 16ರ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಸಿಜಿ ಪರೀಕ್ಷೆಯಲ್ಲಿ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಕಂಡುಬಂದಿದ್ದರೂ ಮೃತ ವ್ಯಕ್ತಿಗೆ ಕೊರೊನಾ ಲಕ್ಷಣಗಳಿದ್ದ ಹಿನ್ನೆಲೆ ರಾತ್ರಿಯೇ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಲಾಗಿತ್ತು. ಇದೀಗ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.