ಉಡುಪಿ: ಹಳ್ಳಿಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ತಡೆಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ಜಗದೀಶ್ ಗ್ರಾಮಗಳಿಗೆ ಭೇಟಿ ನೀಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.
ಹಳ್ಳಿ ಹಳ್ಳಿಗೆ ಕೊರೊನಾ.. ಸುರಿಯುವ ಮಳೆಯಲ್ಲಿ ಗ್ರಾಮಗಳಿಗೆ ತೆರಳಿ ಉಡುಪಿ ಡಿಸಿ ಅವಲೋಕನ - ಉಡುಪಿ ಜಿಲ್ಲಾಧಿಕಾರಿ ಜಗದೀಶ್
ಹಳ್ಳಿ ಹಳ್ಳಿಗೂ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಸ್ವತಃ ಜಿಲ್ಲಾಧಿಕಾರಿ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ಪರಿಸ್ಥಿತಿ ಅವಲೋಕಿಸಲು ಮುಂದಾದ ಜಿಲ್ಲಾಧಿಕಾರಿ
ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಕೋವಿಡ್ ಪೀಡಿತ ಹಳ್ಳಿಗಳಿಗೆ ಭೇಟಿ ಕೊಟ್ಟು ವ್ಯವಸ್ಥೆಗಳ ಪರಿಶೀಲನೆ ನಡೆಸುತ್ತಿದ್ದು, ಅಗತ್ಯವಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವರಿಕೆ ಮಾಡುತ್ತಿದ್ದಾರೆ. ಕಟಪಾಡಿ, ಹೆಬ್ರಿ, ಮುದ್ರಾಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಹಳ್ಳಿಗಳಿಂದ ಚಿಕಿತ್ಸೆಗೆ ಬರುವವರಿಗೆ ವಾಹನ ವ್ಯವಸ್ಥೆಗೂ ಚಿಂತನೆ ನಡೆಸಿದ್ದು, ಶಾಸಕರ ಅನುದಾನ ಬಳಸಿಕೊಂಡು ಆಕ್ಸಿಮೀಟರ್ ನೀಡಲು ಮುಂದಾಗಿದ್ದಾರೆ.