ಉಡುಪಿ: ಜಿಲ್ಲಾಧಿಕಾರಿ ತಾವೇ ಹೋಗಿ ಮರಳು ಕಾಯಲು ಆಗುವುದಿಲ್ಲ. ಯಾರ ಜವಾಬ್ದಾರಿ ಏನು ಎಂಬುದನ್ನು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ. ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ. ಈ ಕುರಿತಾದ ಯುವ ಕಾಂಗ್ರೆಸ್ ಆರೋಪ ಸುಳ್ಳಾಗಿದ್ದು, ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವಂತಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಹೋಗಿ ಮರಳು ಕಾಯಲು ಆಗಲ್ಲ: ಉಡುಪಿ ಡಿಸಿ ತೀಕ್ಷ್ಣ ಪ್ರತಿಕ್ರಿಯೆ - dc-himself-cant-go
ಸ್ವರ್ಣಾ ನದಿಯಲ್ಲಿನ ಮರಳು ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ವಿರುದ್ಧವೇ ಲೋಕಾಯುಕ್ತಕ್ಕೆ ಯುವ ಕಾಂಗ್ರೆಸ್ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕ್ರಮಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ ಉಡುಪಿ ಡಿಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ. ಈಗಾಗಲೇ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿದ್ದೇವೆ. ಐದು ವಾಹನ ಸೀಜ್ ಮಾಡಿ, ಅಕ್ರಮ ಮರಳನ್ನೂ ವಶಕ್ಕೆ ಪಡೆದಿದ್ದೇವೆ. ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ಶಿಫಾರಸು ಮಾಡಿದ್ದೇವೆ. ನಿನ್ನೆ ಮತ್ತೆ ಮರಳು ದಾಸ್ತಾನು ಕಳ್ಳತನ ಮಾಡಲಾಗಿದ್ದು ದೂರು ದಾಖಲಿಸಿಕೊಂಡಿದ್ದೇವೆ ಎಂದು ಡಿಸಿ ಜಿ. ಜಗದೀಶ್ ಪ್ರತಿಕ್ರಿಯೆ ನೀಡಿದ್ದಾರೆ.