ಉಡುಪಿ: SSLC ಪರೀಕ್ಷೆ ತಪ್ಪಿಸಿಕೊಳ್ಳಲಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಡಿಡಿಪಿಐ ಹಾಗೂ ಬೈಂದೂರು ತಹಶೀಲ್ದಾರ್ ಅವರು ದೋಣಿ ಮೂಲಕ ಸೌಪರ್ಣಿಕೆ ನದಿ ದಾಟಿಸಿ ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ.
ಬೈಂದೂರು ವಲಯದ ಮರವಂತೆ ಸರ್ಕಾರಿ ಪ್ರೌಢ ಶಾಲೆಯ ಶಿಲ್ಪಾ ಹಾಗೂ ಸಂಜನಾ ಅವರ ಮನೆ ಕರು ದ್ವೀಪದಲ್ಲಿದ್ದು, ಅಲ್ಲಿಂದ ಊರಿಂದಾಚೆಗೆ ಬರಬೇಕೆಂದರೆ ಮರವಂತೆ, ಇಲ್ಲವಾದರೆ ನಾಡಾ ಮೂಲಕ ಸಾಗಿ ಬರಬೇಕಾಗುತ್ತದೆ.
ದೋಣಿ ಮೂಲಕ ಸಾಗಿ ಬಂದರೂ ಇಲ್ಲಿನ ವಿದ್ಯಾರ್ಥಿಗಳು ಬಯಲು ದಾರಿಯಲ್ಲಿ ಮತ್ತೆ ಅರ್ಧ ಕಿ.ಮೀ ಗೂ ಹೆಚ್ಚು ನಡೆದುಕೊಂಡೆ ಕ್ರಮಿಸಿಬೇಕು. ನಿರಂತರ ಸುರಿದ ಭಾರೀ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿತ್ತು. ಇದರಿಂದಾಗಿ ಪರೀಕ್ಷೆಗೆ ಬರಲು ಈ ವಿದ್ಯಾರ್ಥಿನಿಯರಿಗೆ ಸಮಸ್ಯೆಯಾಗಿತ್ತು. ಇದು ಪರೀಕ್ಷೆಯ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಅವರ ಗಮನಕ್ಕೆ ಬಂದಿದ್ದು, ತಕ್ಷಣವೇ ಮಕ್ಕಳನ್ನು ಕರೆತರಲು ಎಲ್ಲಾ ವ್ಯವಸ್ಥೆಗಳನ್ನು ಶಿಕ್ಷಣ ಇಲಾಖೆ ಮಾಡಿದೆ.