ಉಡುಪಿ: ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೊರಗೆ ಮಾತ್ರ ಒಂದಾಗಿದ್ದಾರೆ, ಒಳಗೆ ಒಬ್ಬರ ಮೇಲೊಬ್ಬರು ಕತ್ತಿ ಮಸೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಕತ್ತಿ ಮಸೆಯುತ್ತಿದ್ದಾರೆ; ಶೆಟ್ಟರ್ - Udupi Jagadish Shettar News
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಬಯಸಿದ್ದು, ಬಹಿರಂಗವಾಗಿ ಸಿಎಂ ಆಗುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಕೆಲ ಶಾಸಕರು ಹೇಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಡಿಕೆಶಿ ಒಳಗಿಂದೊಳಗೆ ಕತ್ತಿ ಮಸೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ-ಡಿಕೆಶಿ ನಡುವೆ ಹಿಂದಿನಿಂದಲೂ ಭಿನ್ನಾಭಿಪ್ರಾಯವಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಬಯಸಿದ್ದು, ಬಹಿರಂಗವಾಗಿ ಸಿಎಂ ಆಗುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಡಿಕೆಶಿ ಮುಖ್ಯಮಂತ್ರಿಯಾಗಬೇಕು ಎಂದು ಕೆಲ ಶಾಸಕರು ಹೇಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ-ಡಿಕೆಶಿ ಒಳಗಿಂದೊಳಗೆ ಕತ್ತಿ ಮಸೆಯುತ್ತಿದ್ದಾರೆ ಎಂದರು.
ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಇನ್ನೂ ಚುನಾವಣೆ ಘೋಷಣೆಯಾಗಿಲ್ಲ. ಪಕ್ಷದ ಒಳಗೆ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆಗಳು ನಡೆದಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಪ್ರಚಾರ ಪಡೆಯುತ್ತಿದೆ. ವಿಜಯೇಂದ್ರ ತಾನು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕೇಳಿಲ್ಲ. ಪಕ್ಷದ ಒಳಗೂ ವಿಜಯೇಂದ್ರ ಹೆಸರು ಚರ್ಚೆಗೆ ಬಂದಿಲ್ಲ. ಮಾಧ್ಯಮಗಳೇ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.