ಉಡುಪಿ:ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಉಡುಪಿಯಲ್ಲಿ ಈಶ್ವರಪ್ಪ ಚಾಟಿ ಬೀಸಿದ್ದಾರೆ.
ಕೊಲೆ ಮಾಡಲು ಕಾಂಗ್ರೆಸ್ ಬೆಂಬಲ ನೀಡುತ್ತಾ? ; ಈಶ್ವರಪ್ಪ ಪ್ರಶ್ನೆ - ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ. ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು ಎಂದು ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ. ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು. ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದ್ಯಾ,? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ? ನೀವು ಜನರ ಮಧ್ಯೆ ಹೋಗಿ ಕೆಲಸ ಮಾಡಿ. ನಾನು ದೇವಸ್ಥಾನದಲ್ಲಿ ಇದೀನಿ ಇಲ್ಲದಿದ್ದರೆ ಇನ್ನೂ ಕೆಟ್ಟ ಪದ ಹೇಳ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ ಎಂಬ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಾದ್ರೆ ಕೊಲೆಗೆ ಕಾಂಗ್ರೆಸ್ ಬೆಂಬಲ ಕೊಡುತ್ತಾ? ಸಿದ್ದರಾಮಯ್ಯ ಬೆಂಬಲ ಕೊಡುವುದಾದರೆ ಒಪ್ಪಿಕೊಂಡು ಬಿಡಲಿ, ನಮ್ಮವರನ್ನೆಲ್ಲ ಜೈಲಿಗೆ ಕಳಿಸಿದ್ದು ಕೂಡಾ ರಾಜಕೀಯ ಪ್ರೇರಿತನಾ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧ ಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ. ತಪ್ಪಿತಸ್ಥನಲ್ಲದಿದ್ದರೆ ಬಿಡುಗಡೆಯಾಗಿ ಹೊರಗೆ ಬರಲಿ, ಕಾಂಗ್ರೆಸ್‌ನ ಧೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಅಂತಾ ಅವರು ಹೇಳಿದ್ದಾರೆ.