ಕರ್ನಾಟಕ

karnataka

ETV Bharat / state

ಉಡುಪಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ - Exam preperation in Udupi

ಉಡುಪಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ, ಸ್ಯಾನಿಟೈಸರ್, ಮಾಸ್ಕ್ ಬಳಕೆಗೆ ಸೂಚಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ

By

Published : Jun 18, 2020, 8:17 AM IST

ಉಡುಪಿ:ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್​​​​ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 27 ಕೇಂದ್ರಗಳಲ್ಲಿ 13,563 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಷ್ಟೇ ಅಲ್ಲದೆ, ಜಿಲ್ಲೆಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದ 1,344 ವಿದ್ಯಾರ್ಥಿಗಳು ಹೊರಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಹೊರಜಿಲ್ಲೆಗಳ 163 ಮಂದಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದು, ಹೊರರಾಜ್ಯದ 23 ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಈ ಪಾಸ್ ನೀಡಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಿದ್ದು, ಜೆರಾಕ್ಸ್ ಅಂಗಡಿ ಮುಚ್ಚಿಸಲು ಹಾಗೂ ಭದ್ರತಾ ವ್ಯವಸ್ಥೆ ಒದಗಿಸಲು ಆದೇಶಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ, ಸ್ಯಾನಿಟೈಸರ್, ಮಾಸ್ಕ್ ಬಳಕೆಗೆ ಸೂಚಿಸಲಾಗಿದೆ. ಶೀತ ಜ್ವರ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಕ್ವಾರಂಟೈನ್ ಕೇಂದ್ರವಾಗಿ ಬಳಸಿಕೊಂಡಿಲ್ಲ. ಎಲ್ಲ ಕೇಂದ್ರಗಳನ್ನೂ ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಒಟ್ಟು 69 ಮಾರ್ಗಗಳಲ್ಲಿ 91 ಕೆಎಸ್ಆರ್​ಟಿಸಿ ಬಸ್​ಗಳನ್ನು ಬಳಸಲಾಗುತ್ತಿದೆ.

ABOUT THE AUTHOR

...view details