ಉಡುಪಿ: ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಕೃಷಿಕರ ಸಮಸ್ಯೆಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ರೈತರ ಪ್ರತಿಭಟನೆ
ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ರೈತರ ಪ್ರತಿಭಟನೆ
ರೈತರ ಮನವಿಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಆಗಮಿಸದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿದ ರೈತರು, ಸರ್ಕಾರ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ಅನುಮತಿ ಇಲ್ಲದೇ ರೈತರು ಕಚೇರಿ ಒಳ ನುಗ್ಗಿದ ಕಾರಣ ಮನವಿ ಸ್ವೀಕರಿಸದೇ ಅಲ್ಲಿಂದ ತೆರಳಿದರು.
ಬಳಿಕ ಆಗಮಿಸಿದ ಪೊಲೀಸರು ಪ್ರತಿಭಟನಾಕಾರನ್ನು ಡಿಸಿ ಕಚೇರಿಯಿಂದ ಹೊರಗೆ ಕಳುಹಿಸಿದರು.