ಕರ್ನಾಟಕ

karnataka

ETV Bharat / state

ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ ಜೀವನ ಪರ್ಯಂತ ಜೈಲು ಶಿಕ್ಷೆ - Udupi Special Poxo Court

ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ತಂದೆಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Court
ನ್ಯಾಯಾಲಯ

By

Published : Dec 1, 2020, 7:55 PM IST

Updated : Dec 1, 2020, 10:50 PM IST

ಉಡುಪಿ:ವರ್ಷದ ಹಿಂದೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ತಂದೆಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ನೀಡಿದೆ.

ಆರೋಪಿಯ ಪತ್ನಿ ಮಾನಸಿಕ ಖಿನ್ನರಾಗಿದ್ದು, ಆತ ತನ್ನ 14 ವರ್ಷ ಪ್ರಾಯದ ಕಿರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಇದನ್ನು 16 ವರ್ಷ ಪ್ರಾಯದ ಹಿರಿಯ ಮಗಳು ವಿರೋಧಿಸಿದ್ದಳು. ಮುಂದೆ ಪತ್ನಿ ಮೃತಪಟ್ಟ ನಂತರವೂ ಆರೋಪಿ ತನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದನ್ನು ಮುಂದುವರೆಸಿದ್ದ ಎಂದು ಆರೋಪಿಸಲಾಗಿತ್ತು.

ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿದ ಅಧಿಕಾರಿಗಳು

ಈ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ತಂದಿದ್ದು, ಅದರಂತೆ ಘಟಕದ ಕಾನೂನು ಪರಿ ವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ, 2019 ಅಕ್ಟೋಬರ್ ತಿಂಗಳಿನಲ್ಲಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ತನಿಖೆ ನಡೆಸಿದ್ದರು. ಬಳಿಕ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಈ ಬಗ್ಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 26 ಮಂದಿ ಸಾಕ್ಷಿಗಳ ಪೈಕಿ ಸಂತ್ರಸ್ತ ಸಹೋದರಿಯರು ಹಾಗೂ ದೂರುದಾರರು ಸೇರಿದಂತೆ 8 ಮಂದಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿ ತಂದೆ ನಡೆಸಿದ ಕೃತ್ಯ ಸಾಬೀತಾಗಿರುವುದಾಗಿ ಅಭಿಪ್ರಾಯಪಟ್ಟು, ಪೋಕ್ಸೋ ತಿದ್ದುಪಡಿ ಕಾಯ್ದೆ 2019ರಂತೆ ಆರೋಪಿಗೆ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ಹಾಗೂ 15,000 ದಂಡ ವಿಧಿಸಿ ಆದೇಶ ನೀಡಿದರು.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ 7 ವರ್ಷ ಕಠಿಣ ಜೈಲು ಶಿಕ್ಷೆ, ಕೊಲೆ ಬೆದರಿಕೆಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ಕಟ್ಟದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದನೇ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ಮತ್ತು 2ನೇ ನೊಂದ ಬಾಲಕಿಗೆ 1.5 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಉಡುಪಿಯ ವಿಶೇಷ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದಾರೆ.

Last Updated : Dec 1, 2020, 10:50 PM IST

ABOUT THE AUTHOR

...view details