ಉಡುಪಿ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನವನ್ನು ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಪ್ರತಿಭಟನಾ ಜಾಥಾ ನಡೆಸಿದರು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕೊರೊನಾ ಸಮಯದಲ್ಲಿ ಬಿಜೆಪಿ ಭ್ರಷ್ಟಾಚಾರ ಎಸಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಸರ್ಕಾರ ನಡೆಸಿದ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಸಮಿತಿ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.