ಉಡುಪಿ : ಕೃಷ್ಣನ ಭಕ್ತರಾಗಿದ್ದ ದಿವಂಗತ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು.
ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ - ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ
ಇತ್ತೀಚೆಗೆ ನಿಧನ ಹೊಂದಿದ ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು 2007 ರಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಆ ಸಂದರ್ಭ ಪೇಜಾವರ ಶ್ರೀಗಳು ಪ್ರಣಬ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದರು.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
2007 ರಲ್ಲಿ ಮಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಉಡುಪಿಗೆ ಆಗಮಿಸಿದ್ದ ಅವರು, ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಗೋಪಾಲನ ದರ್ಶನ ಮಾಡಿದ್ದರು. ಆ ಸಂದರ್ಭ ಪೇಜಾವರ ಶ್ರೀಗಳು ಪ್ರಣಬ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದರು.
ಅದೇ ದಿನ ರಾಜಾಂಗಣದಲ್ಲಿ ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆನಪು ಉಡುಪಿಯ ಜನರಿಗೆ ಈಗಲೂ ಹಸಿಯಾಗಿಯೇ ಇದೆ.