ಉಡುಪಿ: ಹೆಬ್ರಿ ವಾಲ್ಮೀಕಿ ಆಶ್ರಮದ ಶಾಲಾವರಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ. ಘಟನೆ ಬುಧವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಾಸ್ಟೆಲ್‌ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಬೆಂಕಿ ಹಚ್ಚುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಅಮರೇಶ್ ಹಾಗೂ ಐದನೇ ತರಗತಿಯ ವಿನೋದ್ ಮತ್ತು ಮನೋಜ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಬ್ರಿ ಶಾಲಾ ಆವರಣದಲ್ಲಿ ಅಗ್ನಿ ಅವಘಡ.. ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಇದನ್ನೂ ಓದಿ:ವಿಶ್ವವಿಖ್ಯಾತ ಹಂಪಿಯಲ್ಲಿ ಅಗ್ನಿ ಅವಘಡ.. ಸಿಲಿಂಡರ್ ಸ್ಪೋಟಗೊಂಡು ಸುಟ್ಟು ಭಸ್ಮವಾದ ಹೋಟೆಲ್
ಗಾಯಾಳುಗಳ ಪೈಕಿ ಮೂವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಓರ್ವ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೆಬ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಸಂಜೆ ಹೆಬ್ರಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಸಹ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.