ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳು, ಸರ್ಕಾರಿ ಸಂಘಗಳ ಉಪ ನಿಬಂಧಕರು ಹಾಗೂ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು, ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ನೀಡಲಾಗುವ ಸೇವೆಗಳು, ಕೃಷಿ ,ತೋಟಗಾರಿಕೆ, ಮೀನುಗಾರಿಕೆ ಇಲಾಖೆಯಲ್ಲಿನ ವಿವಿಧ ಸೇವೆಗಳು, ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ ಮಂಡಳಿಗಳ ಸೇವೆಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ -ಸಂಸ್ಕೃತಿ ಇಲಾಖೆಯ ಸೇವೆಗಳು ಸ್ಥಗಿತಗೊಂಡಿವೆ.
ಸ್ಥಗಿತದ ಆದೇಶ ಅನ್ವಯವಾಗದ ಸೇವೆಗಳು:
ಬ್ಯಾಂಕ್, ಅಂಚೆ ಕಚೇರಿ, ಪೊಲೀಸ್ ಸೇವೆಗಳು, ಅಗ್ನಿಶಾಮಕ ಸೇವೆಗಳು, ದೂರವಾಣಿ ಸೇವೆಗಳು, ಇಂಟರ್ನೆಟ್ ಸೇವೆಗಳು, ಕೆಎಸ್ಆರ್ಟಿಸಿ ಸಾರಿಗೆ ಸೇವೆಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೇವೆಗಳು. ಸ್ವಚ್ಚತೆ ಕಾರ್ಯಕ್ರಮಗಳು, ಕುಡಿಯುವ ನೀರು, ವಿದ್ಯುತ್ ಶಕ್ತಿ ಪೂರೈಕೆ, ಒಳಚರಂಡಿ ವ್ಯವಸ್ಥೆ
ಅಂಗಡಿಗಳು, ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧಿ ಅಂಗಡಿಗಳು, ಶವ ಸಂಸ್ಕಾರ ಇತ್ಯಾದಿ ಸೇವೆಗಳು ಹಾಗೂ ತುರ್ತು ಸೇವೆಗಳಿಗೆ ಸ್ಥಗಿತದ ಆದೇಶವು ಅನ್ವಯವಾಗುವುದಿಲ್ಲ.
ಮೇಲ್ಕಂಡ ಸೇವೆಗಳಲ್ಲಿ ಸರ್ಕಾರ ಹಾಗೂ ನ್ಯಾಯಾಲಯಗಳಿಗೆ ಸಂಬಂಧಿಸಿದ ಪ್ರಕರಣಗಳು ಮತ್ತು ಅತಿ ತುರ್ತು ಪ್ರಕರಣಗಳಿಗೆ ವಿನಾಯಿತಿ ನೀಡಲಾಗಿದೆ
ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಕೊರೊನಾ ಎಮರ್ಜೆನ್ಸಿ ಆದೇಶ ಹೊರಡಿಸಿದ್ದಾರೆ.