ಉಡುಪಿ: ಜಿಲ್ಲಾ ರಜತೋತ್ಸವ ಉದ್ಘಾಟನೆಗೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ಕೆ.ರಘುಪತಿ ಭಟ್ ಇದ್ದರು.
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - Thawar Chand Gehlot visited Sri Krishna Math
ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದ್ದಾರೆ. ಸ್ಥಳೀಯ ಶಾಸಕ ಕೆ.ರಘುಪತಿ ಭಟ್ ಜೊತೆಗಿದ್ದರು.
ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಥಾವರ್ ಚಂದ್ ಗೆಹ್ಲೋಟ್