ಉಡುಪಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಉಡುಪಿ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಪ್ರತಿಭನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಉಡುಪಿಯಲ್ಲೂ ಇಂದೂ ಪ್ರತಿಭಟನೆ ನಡೆಯಿತು.
ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು
ಕಳೆದ ಒಂದು ವಾರದಿಂದ ಕರ್ತವ್ಯ ನಿರ್ವಹಿಸದೇ ಅಸಹಕಾರ ಚಳವಳಿ ನಡೆಸಿದ್ದ ನೌಕರರು, ಇಂದು ಬೀದಿಗಳಿದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಯ ಕಚೇರಿಯ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ನಾವು ಎರಡನೇ ಹಂತದ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ, ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಬಳಿಕ ಬೇಡಿಕೆ ಈಡೇರಿಸುವಂತೆ ಡಿಹೆಚ್ಒ ಚಂದ್ರಸೂಡ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.