ಉಡುಪಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಉಡುಪಿಯಲ್ಲಿ ಭಾರೀ ಮಳೆ - Heavy Rain at Karkal
ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಕಾರ್ಕಳ ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದೆ. ಮುಂದಿನ ನಾಲ್ಕು ದಿನ ಭಾರೀ ಮಳೆ ಆಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿಯಲ್ಲಿ ಭಾರೀ ಮಳೆ
ಕಾರ್ಕಳ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಧಾರಾಕಾರ ಮಳೆಗೆ ನಗರದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋ ಸರಿನಲ್ಲಿ ಹೂತು ಹೋಗಿದೆ. ಟೆಂಪೋ ಮೇಲೆತ್ತಲು ಮಾಲೀಕರು ಹರಸಾಹಸ ಪಡುತ್ತಿದ್ದಾರೆ.
ಇಂದು ಸಹ ತಾಲೂಕಿನಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.