ಉಡುಪಿ:ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಆರಂಭವಾದ ಉಡುಪಿ ಜಿಲ್ಲೆಯಲ್ಲಿ ನಿನ್ನೆ ಮಹತ್ವದ ಶಾಂತಿ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಭಾಗಿಯಾಗಿ ಶಾಂತಿ ಮಂತ್ರ ಪಠಿಸಿವೆ. ಆದರೆ ಹಿಜಾಬ್ ಹೋರಾಟಕ್ಕೆ ನಾಂದಿಯಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಗೈರಾಗಿ ಚರ್ಚೆಗೆ ಕಾರಣವಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡದ ವಿಚಾರಕ್ಕೆ ಕಳೆದ ಎರಡು ತಿಂಗಳಿನಿಂದ ಉಡುಪಿ ಮಹಿಳಾ ಪಿಯು ಕಾಲೇಜಿನಲ್ಲಿ ಜಟಾಪಟಿ ನಡೆಯುತ್ತಿದೆ. ಪೋಷಕರು ಕಾಲೇಜಿನ ಜಿಲ್ಲಾಡಳಿತ ಮಟ್ಟದ ಸಭೆಯಲ್ಲಿ ಸಮಸ್ಯೆ ಬಗೆಹರಿಯದಿದ್ದಾಗ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.
ಹಿಜಾಬ್ ವಿರುದ್ಧ ಕೇಸರಿ ಸಮರ ನಡೆದು ರಾಜ್ಯವ್ಯಾಪಿ ಹೈಸ್ಕೂಲ್, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೂದಿ ಮುಚ್ಚಿದ ಕೆಂಡದಂತಿರುವ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಶಾಂತಿ ಸಭೆ ನಡೆದಿದ್ದು. ಹೈಕೋರ್ಟ್ ಆದೇಶ ಪಾಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.