ಕರ್ನಾಟಕ

karnataka

ETV Bharat / state

ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ: ಬಸವರಾಜ ಬೊಮ್ಮಾಯಿ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಸ್ವಾಗತ ಮಾಡಲಾಗಿದೆ.

ಬಸವರಾಜ ಬೊಮ್ಮಾಯಿ

By

Published : Sep 27, 2019, 5:23 PM IST

Updated : Sep 27, 2019, 5:31 PM IST

ಉಡುಪಿ:ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ. ಆದ್ರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ. ಆರ್ಥಿಕ‌ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ. ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು, ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಮಾತನಾಡಿ ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ ಎಂದರು. ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ. ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಎಸ್​ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರ ಸಿಬಿಐಗೆ ನೀಡಿದ್ದೇವೆ. ಆದರೆ ಅನುಮತಿ‌ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು ಎಂದು ಹೇಳಿದ್ದಾರೆ.

ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಕೇಳಿದ್ದಕ್ಕೆ ,ಕುಮಾರಸ್ವಾಮಿ ಮೊಸರಲ್ಲಿ‌ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದಷ್ಟೇ ಚುಟುಕಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Last Updated : Sep 27, 2019, 5:31 PM IST

ABOUT THE AUTHOR

...view details