ಕರ್ನಾಟಕ

karnataka

ETV Bharat / state

ಉಡುಪಿ: ಆಸ್ಪತ್ರೆ ಮಹಿಳಾ ಸ್ವಚ್ಛತಾ ಸಿಬ್ಬಂದಿಯಿಂದ ಪ್ರತಿಭಟನೆ - ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ

ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆಕ್ರೋಶಗೊಂಡ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಹಿಳಾ ಸ್ವಚ್ಛತಾ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಉಡುಪಿಯಲ್ಲಿ ಮಹಿಳಾ ಸ್ವಚ್ಛತಾ ಸಿಬ್ಬಂದಿಯಿಂದ ಪ್ರತಿಭಟನೆ
Protest by female cleaning staff at Udupi

By

Published : Dec 17, 2020, 1:27 PM IST

ಉಡುಪಿ: ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸುಮಾರು 30ಕ್ಕೂ ಅಧಿಕ ಮಹಿಳಾ ಸ್ವಚ್ಛತಾ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಕಳೆದ ನಾಲ್ಕು ತಿಂಗಳಿಂದ ಆಸ್ಪತ್ರೆ ವೇತನ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ಸಿಬ್ಬಂದಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಉಡುಪಿಯಲ್ಲಿ ಮಹಿಳಾ ಸ್ವಚ್ಛತಾ ಸಿಬ್ಬಂದಿಯಿಂದ ಪ್ರತಿಭಟನೆ

ಜಿಲ್ಲೆಯಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉದ್ಯಮಿ ಬಿ.ಆರ್​.ಶೆಟ್ಟಿ ಎಂಬವರು ವಹಿಸಿಕೊಂಡು ದೊಡ್ಡ ಸುಸಜ್ಜಿತ ಆಸ್ಪತ್ರೆಯನ್ನಾಗಿ ಮಾಡಿದ್ದಾರೆ. ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದ್ದು, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎಂದು ನಾಮಕರಣ ಮಾಡಿದ್ದಾರೆ.

ಈ ಆಸ್ಪತ್ರೆಗೆ ಸ್ಚಚ್ಛತಾ ಕೆಲಸ ಮಾಡುವುದಕ್ಕಾಗಿ ಮೊದಲು ಸುಮಾರು 60 ಮಂದಿ ಮಹಿಳೆಯರನ್ನು ಬೆಂಗಳೂರಿನ ಪಿಎಂಎಸ್ ಎಂಬ ಏಜೆನ್ಸಿ ಮೂಲಕ ನೇಮಿಸಿಕೊಳ್ಳಲಾಗಿತ್ತು. ಸದ್ಯ ಈ ಪೈಕಿ ಸುಮಾರು 30 ಮಂದಿ ಮಹಿಳೆಯರು ಹೌಸ್ ಕೀಪಿಂಗ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇವರಿಗೆ ಆಸ್ಪತ್ರೆ ಕಳೆದ ನಾಲ್ಕು ತಿಂಗಳಿನಿಂದ ಸಂಬಳ ನೀಡಿಲ್ಲ. ಹಾಗಾಗಿ ಸಂಬಳ ನೀಡುವವರೆಗೂ ಕೆಲಸ ಮಾಡಲ್ಲ ಎಂದು ಪಟ್ಟು ಹಿಡಿದು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ದಿ: ಡಿಎಸ್​ಪಿ ಲಕ್ಷ್ಮೀ ಆತ್ಮಹತ್ಯೆ ಕುರಿತು ಮಾಹಿತಿ ಪಡೆದ ಗೃಹ ಸಚಿವ ಬೊಮ್ಮಾಯಿ

ABOUT THE AUTHOR

...view details