ಉಡುಪಿ: ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ಎಕರೆ ಕಾಡು ನಾಶವಾಗಿದೆ.
ಇಲ್ಲಿನ ಹತ್ತಾರು ಎಕರೆ ಪ್ರದೇಶಗಳಿಗೆ ಬೆಂಕಿ ಹಬ್ಬಿದೆ. ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಮತ್ತು ಗಾಳಿ ಇದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ. ಒಣಗಿದ್ದ ಹುಲ್ಲಿಗೆ ಬೆಂಕಿ ಹಬ್ಬಿದ ಪರಿಣಾಮ ಆಸುಪಾಸಿನ ಮನೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಕೆಲವೇ ನಿಮಿಷಗಳಲ್ಲಿ ಹತ್ತಾರು ಎಕರೆ ಭೂಪ್ರದೇಶಕ್ಕೆ ಬೆಂಕಿ ವ್ಯಾಪಿಸಿತು.