ಉಡುಪಿ : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಇಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಬಳಿಕ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆಯಾಗಿದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ. ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದರು.
'ನೀವು ಭ್ರಷ್ಟಾಚಾರದಲ್ಲಿ ತೊಡಗಿಲ್ಲ ಎಂಬ ಆರೋಪವೇನಾದ್ರೂ ಸಾಬೀತಾದರೆ ನಾನು ನಿಮ್ಮ ಮನೆಯ ಆಳಾಗಿ ದುಡಿಯುವೆ'
ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ, ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ.
ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದು ಅವರು ಹೇಳಿದರು.