ಉಡುಪಿ:ಲಾರಿಯಲ್ಲಿ ಹಿಂಸಾತ್ಮಕವಾಗಿ 18 ಎತ್ತುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರದ ನಿವಾಸಿ ನಜೀರುಲ್ಲ (43) ಮತ್ತು ಮೈಸೂರಿನ ರಾಘವೇಂದ್ರ (25) ಬಂಧಿತ ಆರೋಪಿಗಳು. ಆರೋಪಿಗಳು ಮಂಗಳೂರು ನೋಂದಣಿ ಸಂಖ್ಯೆಯ (ಕೆಎ 19 ಎ 1801) 10 ಚಕ್ರದ ಲಾರಿಯಲ್ಲಿ 18 ಎತ್ತುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಕೆ. ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಅವರ ನೇತೃತ್ವದ ತಂಡವು ತ್ರಾಸಿ ಮರವಂತೆಯ ಬಳಿ ದಾಳಿ ನಡೆಸಿದೆ.