ಉಡುಪಿ: ಗೋ ಹತ್ಯೆ ನಿಷೇಧಕ್ಕೆ ಪ್ರಬಲವಾದ ಕಾನೂನು ಜಾರಿಗೆ ಒತ್ತಾಯಿಸಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸಿಎಂಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಅಧಿವೇಶನದಲ್ಲೇ ಕಾನೂನು ಜಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ... - ಸಿಎಂಗೆ ಪತ್ರ
ಗೋ ಹತ್ಯೆ ನಿಷೇಧ ಕಾನೂನು ಜಾರಿಮಾಡುವಂತೆ ಆಗ್ರಹಿಸಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸಿಎಂಗೆ ಪತ್ರ ಬರೆದಿದ್ದಾರೆ.
![ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ... Vishwa prasanna theertha swamiji](https://etvbharatimages.akamaized.net/etvbharat/prod-images/768-512-8834154-thumbnail-3x2-chaiii.jpg)
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು
ಕರಾವಳಿ ಪ್ರದೇಶ ಮತ್ತು ರಾಜ್ಯದಲ್ಲಿ ಗೋಹತ್ಯೆ ನಿರಂತರವಾಗಿ ನಡೆಯುತ್ತಿದೆ. ಗೋ ಕಳ್ಳತನ ನಡೆಸಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಲಾತ್ತಿದೆ. ಇದನ್ನು ಪ್ರಬಲವಾದ ಕಾನೂನು ನಿಂದಷ್ಟೇ ತಡೆಗಟ್ಟಬಹುದಾಗಿದೆ ಎಂದು ಸ್ವಾಮೀಜಿ ಹೇಳಿದರು.
ಗೋ ಹತ್ಯೆ ತಡೆಗಟ್ಟಿ ಗೋ ಸಂತತಿಯನ್ನು ಉಳಿಸಬೇಕಾಗಿದ್ದು, ಇದಕ್ಕಾಗಿ ಪ್ರಸಕ್ತ ಅಧಿವೇಶನದಲ್ಲೇ ಪ್ರಬಲವಾದ ಕಾನೂನು ಜಾರಿ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.