ಉಡುಪಿ: ನಗರದಲ್ಲಿರುವ ಜಿಲ್ಲಾಸ್ಪತ್ರೆಯನ್ನು ಸ್ಥಳಾಂತರ ಮಾಡಿ, ಅಜ್ಜರಕಾಡಿನಲ್ಲಿರುವ ತಾಲೂಕು ಮಟ್ಟದ ಆಸ್ಪತ್ರೆಯನ್ನು 250 ಹಾಸಿಗೆಗಳೊಂದಿಗೆ ಮೇಲ್ದರ್ಜೆಗೇರಿಸಲು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಜಿಪಂ ಸಾಮಾನ್ಯ ಸಭೆ: ತಾಲೂಕು ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೆ ಚಿಂತನೆ
ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಜ್ಜರಕಾಡಿನಲ್ಲಿರುವ ತಾಲೂಕು ಮಟ್ಟದ ಆಸ್ಪತ್ರೆಯನ್ನು 250 ಹಾಸಿಗೆಗಳೊಂದಿಗೆ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.
ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸುಮಾರು 115 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದೆ. ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ ತೀರ್ಮಾನಿಸಲಾಯಿತು.
ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ನೂತನ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ರೋಗಿಗಳನ್ನು ಹಾಗೂ ಸಂಪೂರ್ಣ ಉಪಕರಣಗಳನ್ನು ಸ್ಥಳಾಂತರಿಸುವ ಅಗತ್ಯವಿದೆ. ಅದಕ್ಕಾಗಿ ಹೊಸ ಕಟ್ಟಡ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಬ್ರಹ್ಮಾವರಕ್ಕೆ ಸ್ಥಳಾಂತರಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಮತ್ತು ಎಲ್ಲಾ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.