ಉಡುಪಿ:ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಮಹಿಮೆ, ಪವಾಡಗಳನ್ನು ನಾವು ಕೇಳಿರುತ್ತೇವೆ. ಅದರಂತೆ, ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಕೊರಗಜ್ಜನ ದಯೆಯಿಂದ ಬದುಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕೆಎಂಸಿಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲ ಪದೇ ಪದೆ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.
ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು. ಅಷ್ಟರಲ್ಲಿ ಆಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನೆಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ, ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು.