ಉಡುಪಿ:ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಜೊತೆ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಜಿಲ್ಲೆಯ ಕಾಪುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇವರಿಬ್ಬರು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ.
ಉಡುಪಿ: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ - ರಾಜಕೀಯ ಮುಖಂಡ
ಸಮಾಜ ಸೇವಕ ಮತ್ತು ನಾಟಕಕಾರ ಕಾಪು ಲೀಲಾಧರ ಶೆಟ್ಟಿ ಅವರು ತಮ್ಮ ಪತ್ನಿ ವಸುಂಧರಾ ಶೆಟ್ಟಿ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
Published : Dec 13, 2023, 9:58 AM IST
|Updated : Dec 13, 2023, 10:59 AM IST
ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಇವರು ಒಂದು ಬಾರಿ ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ. ಕೌಟುಂಬಿಕ ಕಾರಣದಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಓದಿ:ಚಿಕ್ಕಮಗಳೂರು: ಗೃಹಿಣಿ ಅನುಮಾನಾಸ್ಪದ ಸಾವು.. ಪತಿ ವಿರುದ್ಧ ಕೊಲೆ ಆರೋಪ