ಉಡುಪಿ: ರಾಜ್ಯದ ಪ್ರಥಮ ತೇಲುವ ಸೇತುವೆ ( floating bridge) ಶುಕ್ರವಾರ ಉದ್ಘಾಟನೆಯಾಗಿದೆ. ಉಡುಪಿಯ ಮಲ್ಪೆ ಬೀಚ್ನಲ್ಲಿಈ ತೇಲುವ ಸೇತುವೆಯ ವ್ಯವಸ್ಥೆ ಮಾಡಲಾಗಿದೆ. ಇನ್ಮುಂದೆ ಪ್ರವಾಸಿಗರಿಗೆ ಹೊಸ ಅನುಭವ ಸವಿಯಲಿದ್ದಾರೆ.
ಈ ತೇಲುವ ಸೇತುವೆಯನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು. ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಿಸಿರುವುದು ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿದೆ ಎಂದು ಶಾಸಕರು ಹೇಳಿದರು. ಸೇತುವೆಯು 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲ ಹೊಂದಿದೆ. ಇದರಲ್ಲಿ ಒಂದು ಬಾರಿಗೆ ನೂರು ಜನರು ಸಾಗಬಹುದು.