ಕರ್ನಾಟಕ

karnataka

ETV Bharat / state

ಕುಂದಾಪುರ ಬಳಿ ಅಪಘಾತ: ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್​ ಶೆಟ್ಟಿ ಸಾವು - ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ

ಹಾಲಾಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್​ ಶೆಟ್ಟಿ ಮೃತಪಟ್ಟಿದ್ದಾರೆ.

KMF Director rajeev shetty died in accident
ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಾವು

By

Published : Dec 9, 2020, 9:36 PM IST

ಉಡುಪಿ:ಕುಂದಾಪುರ ತಾಲೂಕು ಹಾಲಾಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್​ ಶೆಟ್ಟಿ ಮೃತಪಟ್ಟಿದ್ದಾರೆ.

ಶಂಕರನಾರಾಯಣದಲ್ಲಿ ಕಾರ್ಯಕ್ರಮ ಮುಗಿಸಿ ಹಾಲಾಡಿಗೆ ಬರುತ್ತಿರುವ ವೇಳೆ ಹಾಲಾಡಿಯಲ್ಲಿ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹದ್ದೂರು ರಾಜೀವ್​ ಶೆಟ್ಟಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಪ್ರಸ್ತುತ ಕೆಎಂಎಫ್ ನಿರ್ದೇಶಕರಾಗಿರುವ ಹದ್ದೂರು ರಾಜೀವ್​ ಶೆಟ್ಟಿ ಶಂಕರನಾರಾಯಣ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details