ಉಡುಪಿ: ಐತಿಹಾಸಿಕ ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಕೊರೊನಾ ನಿಯಾನುಸಾರವಾಗಿ ವಾರ್ಷಿಕ ಉತ್ಸವ ಸಂಪನ್ನಗೊಂಡಿದೆ.
ಕೊಲ್ಲೂರು ಮೂಕಾಂಬಿಕಾ ದೇಗುಲದ ವಾರ್ಷಿಕ ಉತ್ಸವ ಸಂಪನ್ನ ದೇವಿಯ ವಾರ್ಷಿಕ ಉತ್ಸವ ನೋಡಲು ಪ್ರತಿವರ್ಷ ಕೇರಳ ಮತ್ತು ತಮಿಳುನಾಡು ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದರು. ಆದರೆ, ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈ ಬಾರಿ ಅದ್ದೂರಿ ಆಚರಣೆ ಹಾಗೂ ಹೊರರಾಜ್ಯ, ಜಿಲ್ಲೆಗಳ ಭಕ್ತರ ಆಗಮನಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಹೀಗಾಗಿ, ಈ ವರ್ಷ ರಥೋತ್ಸವವನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು.
ದೇವಸ್ಥಾನದಲ್ಲಿ ಜಾತ್ರೆಯ ಸಂದರ್ಭದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಕೈಬಿಟ್ಟು, ಕೇವಲ ಧಾರ್ಮಿಕ ಆಚರಣೆಗಳನ್ನು ಮಾತ್ರ ನಡೆಸಲಾಗಿದೆ. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಜೋಡಿ ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕೂರಿಸಿ, ಬೀದಿ ಗಣಪತಿ ದೇಗುಲದವರೆಗೆ ಮೆರವಣಿಗೆ ನಡೆಸಲಾಯಿತು.
ರಥಬೀದಿಯಲ್ಲಿ ವೈಭವದಿಂದ ನಡೆಯುತ್ತಿದ್ದ ಬೀದಿ ತೇರು ಈ ವರ್ಷ ನಡೆಯಲಿಲ್ಲ. ಕಳೆದ ವರ್ಷವೂ ಕೋವಿಡ್ ಕಾರಣದಿಂದಾಗಿ ದೇವಾಲಯದ ವಾರ್ಷಿಕ ಉತ್ಸವ ಪೂರ್ಣ ಪ್ರಮಾಣದಲ್ಲಿ ನಡೆದಿರಲಿಲ್ಲ.
ಇದನ್ನೂ ಓದಿ:ಗಂಡನ ಅಗಲಿಕೆಯ ವೇದನೆ: ಪುತ್ರಿಯರೊಂದಿಗೆ ಕೆರೆಗೆ ಹಾರಿ ಪ್ರಾಣ ಬಿಟ್ಟಳು ಪತ್ನಿ