ಉಡುಪಿ: ಕರಾವಳಿಯಲ್ಲೂ ಕೊರೊನಾ ತನ್ನ ಕಬಂಧಬಾಹುಗಳನ್ನು ಚಾಚುತ್ತಲೇ ಇದೆ. ಕೊರೊನಾದಿಂದ ಈಗಾಗಲೇ ಜಿಲ್ಲೆಯ ಜನರು ತತ್ತರಿಸಿದ್ದಾರೆ. ಈಗ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ಪಾಸಿಟಿವ್ ಬಂದಿದೆ.
59ವರ್ಷದ ಹೆಡ್ ಕಾನ್ಸ್‌ಟೇಬಲ್ ಗೆ ಕೋವಿಡ್-19 ತಗುಲಿದ್ದು, ಪೊಲೀಸ್ ಸಿಬ್ಬಂದಿಗೆ ಕೊರೊನಾ ಹಿನ್ನೆಲೆಯಲ್ಲಿ ಕುಂದಾಪುರ ಸಂಚಾರಿ ಪೊಲೀಸ್ ಠಾಣೆ, ಸಿಬ್ಬಂದಿಯಿದ್ದ ಕ್ವಾಟ್ರಸ್ಅನ್ನು ಸೀಲ್ ಡೌನ್ ಮಾಡಲಾಗಿದೆ.