ಉಡುಪಿ: ಮಣಿಪಾಲದ ಮಲ್ಪೆ-ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಮಣಿಪಾಲ ಪ್ರೀಮಿಯರ್ ಅಪಾರ್ಟ್ಮೆಂಟ್ ಕಟ್ಟಡದ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಬಳಿ ಭೂ ಕುಸಿತ: ಮನೆ ಖಾಲಿ ಮಾಡುವಂತೆ ನಿವಾಸಿಗಳಿಗೆ ಅಧಿಕಾರಿಗಳ ಸೂಚನೆ - ಉಡುಪಿಯಲ್ಲಿ ಧಾರಾಕಾರ ಮಳೆ
ಮಣಿಪಾಲದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಮಣಿಪಾಲ ಪ್ರೀಮಿಯರ್ ಅಪಾರ್ಟ್ಮೆಂಟ್ ಕಟ್ಟಡದ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದ್ದು, ಕಟ್ಟಡದಲ್ಲಿರುವ ಎಲ್ಲರಿಗೂ ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಣಿಪಾಲದಲ್ಲಿ ಭೂ ಕುಸಿತ
ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ನೀರಿನ ಸಹಜ ಹರಿವಿಗೆ ತಡೆಯೊಡ್ಡಿದ ಕಾರಣ ಭೂಕುಸಿತವಾಗಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ ಭೂಕುಸಿತ ಕಾಣಿಸಿಕೊಂಡಿತ್ತು. ಕಟ್ಟಡದಲ್ಲಿರುವ ಎಲ್ಲರಿಗೂ ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗವನ್ನು ಪೊಲೀಸರು ಸಂಚಾರಕ್ಕೆ ನಿರ್ಬಂಧಿಸಿದ್ದಾರೆ. ತಹಶೀಲ್ದಾರ್, ನಗರಸಭಾ ಕಮಿಷನರ್ ಸೇರಿ ಹಲವಾರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Last Updated : Sep 21, 2020, 9:03 PM IST