ಉಡುಪಿ: ಜಿಲ್ಲೆಯ ಮಣಿಪಾಲ ಸಮೀಪದ ವಿಜಯನಗರ ಕೋಡಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಬೋನಿಗೆ ಬಿದ್ದ ಚಿರತೆ... ನಿಟ್ಟುಸಿರು ಬಿಟ್ಟ ಜನರು - ಉಡುಪಿ ಸುದ್ದಿ
ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ವಿಜಯನಗರ ಕೋಡಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಬೋನಿಗೆ ಬಿದ್ದ ಚಿರತೆ..ನಿಟ್ಟುಸಿರು ಬಿಟ್ಟ ಜನರು
ಕಳೆದ ಕೆಲ ದಿನಗಳಿಂದ ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ಜನರಲ್ಲಿ ಭೀತಿ ಹುಟ್ಟಿಸಿತ್ತು. ಜೊತೆಗೆ ಸುತ್ತಮುತ್ತಲಿನ ಮನೆಗಳ ಹಟ್ಟಿಯಲ್ಲಿದ್ದ ಕರು, ನಾಯಿ, ಕೋಳಿಗಳನ್ನು ತಿನ್ನುತ್ತಿತ್ತು. ಚಿರತೆಯ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಭಾಗದ ಜನರು ರಾತ್ರಿ ವೇಳೆ ಹೊರಬರಲು ಭಯಪಡುತ್ತಿದ್ದರು.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದರು. ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.