ಉಡುಪಿ:ರಾಜ್ಯದೊಳಗೆ ಓಡಾಟ ನಡೆಸಲು ಎಲ್ಲರಿಗೂ ಅವಕಾಶ ನೀಡಿಲ್ಲ. ಜಿಲ್ಲೆಯಿಂದ ಜಿಲ್ಲೆಯ ನಡುವೆ ಓಡಾಟಕ್ಕೂ ಅವಕಾಶವಿಲ್ಲ. ಕೂಲಿ ಕಾರ್ಮಿಕರಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆರೋಗ್ಯದ ಸಮಸ್ಯೆ ಇದ್ದರೆ ಮಾತ್ರ ತಾಲೂಕು ಕಚೇರಿಯಲ್ಲಿ ಪಾಸ್ ಕೊಡುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ವಿಚಾರ: ಕೂಲಿ ಕಾರ್ಮಿಕರಿಗೆ ಮಾತ್ರ ಓಡಾಟಕ್ಕೆ ಅವಕಾಶ
ಮೇ 17 ವರೆಗೆ ಉಡುಪಿಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಲ್ಲಿದ್ದು, ಯಾರೂ ಕೂಡ ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ ಎಂದು ಡಿಸಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.
ಹೊರ ರಾಜ್ಯಕ್ಕೆ ಹೋಗುವ ಕಾರ್ಮಿಕರು, ಪ್ರವಾಸಿಗಳ ಆನ್ ಲೈನ್ ಮೂಲಕ ಅಪ್ಲಿಕೇಷನ್ ಹಾಕಬೇಕು. ಹಾಗೂ ಹೊರ ರಾಜ್ಯದಿಂದ ಉಡುಪಿ ಜಿಲ್ಲೆಗೆ ಬರುವವರು ಕೂಡಾ sevasindhu.karnataka.gov.in ಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಬಂದನಂತರ ಅದನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ, ಆಯಾ ರಾಜ್ಯಗಳ ಜೊತೆ ಮಾತನಾಡಿ, ಯಾವ ರೀತಿ ಕಳಿಸಬೇಕು ಅಥವಾ ಕರೆಸಿಕೊಳ್ಳಬೇಕು ಎಂದು ನಿರ್ಧರಿಸ್ತೇವೆ ಎಂದು ತಿಳಿಸಿದ್ದಾರೆ.
ಅಲ್ಲದೇ ಮೇ 17 ವರೆಗೆ ಉಡುಪಿಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಲ್ಲಿದ್ದು, ಯಾರು ಕೂಡ ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.