ಕರ್ನಾಟಕ

karnataka

ETV Bharat / state

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ - ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿ ವೃದ್ಧ ಬಂಧನ

ಮಕ್ಕಳ ಸಹಾಯವಾಣಿಗೆ 11 ವರ್ಷದ ಅಪ್ರಾಪ್ತೆಯು ತನ್ನ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಳು. ಇದರ ಪ್ರಕಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

man-arrested-for-sexually-harassing-minor-girl-in-udupi
ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

By

Published : Aug 7, 2021, 1:30 AM IST

ಉಡುಪಿ:ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 65 ವರ್ಷ ಪ್ರಾಯದ ವೃದ್ಧನನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅನಂತ ಸೇರಿಗಾರ್ ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ. ಮಕ್ಕಳ ಸಹಾಯವಾಣಿಗೆ 11 ವರ್ಷದ ಅಪ್ರಾಪ್ತೆಯು ತನ್ನ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಮಕ್ಕಳ ಸಹಾಯವಾಣಿ ಕಡೆಯಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಲಾಗಿತ್ತು.

ತಕ್ಷಣ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್​​, ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದ್ದರು. ನಂತರ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಗಿತ್ತು.

ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಮಂಡ್ಯ: ನೇಣಿಗೆ ಕೊರಳೊಡ್ಡಿದ ಅಪ್ರಾಪ್ತ ವಯಸ್ಸಿನ ಪ್ರೇಮಿಗಳು

ABOUT THE AUTHOR

...view details