ಉಡುಪಿ: ಲ್ಯಾಪ್ಟಾಪ್ ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಖದೀಮ ಸೆರೆ - ಲ್ಯಾಪ್ಟಾಪ್ ಕಳ್ಳತನ ಆರೋಪಿ ಬಂಧನ
ಲ್ಯಾಪ್ಟಾಪ್ ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಲ್ಯಾಪ್ಟಾಪ್ ಕಳ್ಳನ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಹೊಯ್ಗೆಪದವು ಗ್ರಾಮದ ಯೋಗೀಶ್ ಬಂಧಿತ ಆರೋಪಿ.
ಮಣಿಪಾಲ್ ಸಮೀಪದ ಪೆರಂಪಳ್ಳಿ ಬಳಿ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 133 ಗ್ರಾಂ ಚಿನ್ನಾಭರಣ, 5 ಲ್ಯಾಪ್ಟಾಪ್ ಹಾಗೂ 1 ಲಕ್ಷ ರೂಪಾಯಿ ನಗದು ಹಾಗೂ ಪ್ರಕರಣಕ್ಕೆ ಬಳಸಿದ ಮೋಟಾರ್ ಸೈಕಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ 6 ಲಕ್ಷದ 65 ಸಾವಿರ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.