ಉಡುಪಿ:ನಿಷೇಧಿತ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಡ್ರಗ್ ಪೆಡ್ಲರ್ ನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರದ ಮಹಮ್ಮದ್ ಫಜಲ್ ಬಂಧಿತ ಆರೋಪಿ. ಈತ ಉಡುಪಿಯ ಫರ್ಹಾನ್ ಮತ್ತು ಸಫಾ ಜೊತೆ ಸೇರಿ ಡ್ರಗ್ಸ್ ಮಾರಾಟಕ್ಕೆ ಸಂಚು ನಡೆಸುತ್ತಿದ್ದನು.
ಮಣಿಪಾಲದಲ್ಲಿ ಡ್ರಗ್ ಪೆಡ್ಲರ್ ಬಂಧನ - Udupi crime latest news
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಡ್ರಗ್ ಪೆಡ್ಲರ್ನನ್ನ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
![ಮಣಿಪಾಲದಲ್ಲಿ ಡ್ರಗ್ ಪೆಡ್ಲರ್ ಬಂಧನ Drug pedlar](https://etvbharatimages.akamaized.net/etvbharat/prod-images/768-512-06:30:41:1602766841-kn-udp-05-15-drug-pedler-7202200jpg-15102020175737-1510f-1602764857-845.jpg)
Drug pedlar
ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 54 ನಿಷೇದಿತ ಎಮ್ಡಿಎಮ್ಎ ಮಾತ್ರೆಗಳು, 30 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಅಂದಾಜು 4,63,600 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆನ್ಲೈನ್ನಲ್ಲಿ ಡ್ರಗ್ಸ್ ಮಾತ್ರೆ ಹಾಗೂ ಬ್ರೌನ್ ಶುಗರ್ ತರಿಸುತ್ತಿದ್ದ ಫಜಲ್, ಮಣಿಪಾಲದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದನು ಎನ್ನಲಾಗುತ್ತಿದೆ.