ಉಡುಪಿ:ಬೆಂಗಳೂರು ಗ್ರಾಮಾಂತರ ನಿವಾಸಿಗಳಿಬ್ಬರು ಕುಂದಾಪುರದ ಕೋಡಿ ಸಮುದ್ರ ಕಿನಾರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸ್ನೇಹಿತನ ಹೆಂಡತಿ ಜೊತೆ ಗುಪ್ತ್ ಗುಪ್ತ್ ಪ್ರೇಮ... ಆತ್ಮಹತ್ಯೆಗೆ ಯತ್ನಿಸಿದ ವಿವಾಹಿತ ಪ್ರೇಮಿಗಳು - ವಿವಾಹಿತರಿಬ್ಬರು ಆತ್ಮಹತ್ಯೆ ಯತ್ನ
ಬೆಂಗಳೂರು ಗ್ರಾಮಾಂತರ ನಿವಾಸಿಗಳಿಬ್ಬರು ಕುಂದಾಪುರದ ಕೋಡಿ ಸಮುದ್ರ ಕಿನಾರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹನುಮಂತನಗರದ ನಿವಾಸಿಗಳಾದ ಇವರಿಬ್ಬರಿಗೂ ಮದುವೆಯಾಗಿದ್ದು, ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಬ್ಬರು ಮಕ್ಕಳಾದ ತಂದೆಯಾದ ಆತ ತನ್ನ ಸ್ನೇಹಿತನ ಹೆಂಡತಿ ಜೊತೆ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ.
ಇನ್ನೋವಾ ಕಾರಿನಲ್ಲಿ ಕೋಡಿಗೆ ಬಂದಿದ್ದ ಇವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ನರಳಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಕುಂದಾಪುರ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.